ಬೆಂಗಳೂರು: ಇತ್ತೀಚೆಗಷ್ಟೇ ನಡೆದಿದ್ದ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಕುಮಾರಸ್ವಾಮಿಗೆ ಈಗ ಮತ್ತೊಮ್ಮೆ ಅಂತಹ ಸ್ಥಿತಿ ಬಂದಿದೆ.
ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲೂ ಮುಖಭಂಗವಾಗಿದೆ. ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಉಪ ಚುನಾವಣೆ ನಂತರ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆದಿತ್ತು. ಈ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಆದರೆ, ಕುಮಾರಸ್ವಾಮಿ ಬಣದ ಡಾ.ಆಂಜಿನಪ್ಪಗೆ ಸೋಲಾಗಿದೆ. ಕೆಂಚಪ್ಪ ಗೌಡ 21 ಮತಗಳನ್ನು ಪಡೆದುಕೊಂಡಿದ್ದು, ಡಾ.ಆಂಜಿನಪ್ಪ 14 ಮತ ಪಡೆದು ಸೋಲು ಕಂಡಿದ್ದಾರೆ.
ಉಪಾಧ್ಯಕ್ಷರಾಗಿ ಎಲ್ ಶ್ರೀನಿವಾಸ್ ಮತ್ತು ಡಾ. ರೇಣುಕಾಪ್ರಸಾದ್ ಕೆ.ವಿ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಕೋನಪ್ಪರೆಡ್ಡಿ, ಸಹಾಯಕ ಕಾರ್ಯದರ್ಶಿಯಾಗಿ ಹನುಮಂತರಾಯಪ್ಪ. ಆರ್ ಮತ್ತು ಖಜಾಂಚಿಯಾಗಿ ಎನ್.ಬಾಲಕೃಷ್ಣ ಆಯ್ಕೆ ಆಗಿದ್ದಾರೆ. ಈ ಚುನಾವಣೆ ರಾಜ್ಯದ ಗಮನ ಸೆಳೆದಿತ್ತು.