ರಾಮನಗರ : ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರವನ್ನು ಅದ್ವಾನಗೊಳಿಸಿದ್ದು, ನಗರ ಸ್ವಚ್ಛಗೊಳಿಸುವ ಉದ್ಧೇಶದಿಂದ ನಗರಸಭಾ ಸದಸ್ಯರ ಸಭೆ ಕರೆದಿದ್ದೇನೆ ಎಂದು ಚನ್ನಪಟ್ಟಣ ನೂತನ ಶಾಸಕ ಸಿ.ಪಿ. ಯೋಗೇಸ್ವರ್ ಹೇಳಿದ್ದಾರೆ.
ಚನ್ನಪಟ್ಟಣ ನಗರ ಬಹಳ ದುಸ್ಥಿತಿಯಲ್ಲಿದೆ. ಬಸ್ ಸ್ಟ್ಯಾಂಡ್, ಕಸ, ಯುಜಿಡಿ ಸಮಸ್ಯೆ ಇದೆ. ಇವುಗಳನ್ನು ಬಗೆಹರಿಸಬೇಕಿದೆ. ಕ್ಷೇತ್ರದ ಬಗ್ಗೆ ಮಾರಸ್ವಾಮಿ ಯಾವ ಆಸಕ್ತಿ ಹಾಗೂ ಕ್ರಮ ಕೈಗೊಂಡಿಲ್ಲ. ಹೀಗಾಗಿ ನಾನು ನಿರಂತರವಾಗಿ ಅಭಿವೃದ್ಧಿಯತ್ತ ಗಮನ ಹರಿಸಬೇಕಿದೆ ಎಂದಿದ್ದಾರೆ.
ದೇವೆಗೌಡರಿಗೆ ವಯೋಸಹಜ ಕಾಯಿಲೆ ಇರೋದ್ರಿಂದ ಪಕ್ಷ ಮುನ್ನಡೆಸಲು ಸಾಧ್ಯ ಆಗ್ತಿಲ್ಲ. ಅದಕ್ಕೆ ಪರ್ಯಾಯವಾದ ನಾಯಕತ್ವ ಇಲ್ಲ. ಅದೊಂದು ಕುಟುಂಬ ಪಕ್ಷ. ಕುಮಾರಸ್ವಾಮಿ ಅವರು ಸೋತಿದ್ದಾರೆ. ಅವರ ನಾಯಕತ್ವದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸೀಟು ಬಂದಿವೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 136 ಸೀಟು ಗೆಲ್ಲುತ್ತಾರೆ. ಈ ಎರಡು ಹೋಲಿಕೆ ನೋಡಿದ್ರೆ ಕುಮಾರಸ್ವಾಮಿ ನಾಯಕತ್ವ ಕ್ಷೀಣಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ಇಡೀ ಕುಟುಂಬವೇ ಹೋರಾಟ ಮಾಡಿದರೂ ಚನ್ನಪಟ್ಟಣ ಗೆಲ್ಲಲು ಸಾಧ್ಯ ಆಗಲಿಲ್ಲ. ಜೆಡಿಎಸ್ ಕಾರ್ಯಕರ್ತರು, ಜನ ಶಾಸಕರು ನೊಂದಿದ್ದಾರೆ. ಪಕ್ಷವನ್ನೇ ಪಣಕ್ಕಿಟ್ಟು ಹೋರಾಟ ಮಾಡಿದರು. ಆದರೂ ಜನರು ತಿರಸ್ಕರಿಸಿದರು ಎಂದು ಹೇಳಿದ್ದಾರೆ.