ರಾಮನಗರ: ಚನ್ನಪಟ್ಟಣ ಕ್ಷೇತ್ರಕ್ಕೆ ಇನ್ನೊಂದು ವಾರದಲ್ಲಿ ಚುನಾವಣೆ ಘೋಷಣೆಯಾಗಲಿದ್ದು, ಕಾರ್ಯಕರ್ತರು ಸಿದ್ಧವಾಗಿರಬೇಕೆಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಅವರು, ಸದ್ಯದಲ್ಲಿಯೇ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಬಿಜೆಪಿಯ ಕೇಂದ್ರ ವರಿಷ್ಠರೊಂದಿಗೆ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸುತ್ತೇವೆ. ಈ ಕ್ಷೇತ್ರದಲ್ಲಿ ಕಳೆದ ಎರಡು ಚುನಾವಣೆಗಳಲ್ಲಿ ನಾವು ಗೆದ್ದಿದ್ದೇವೆ. ಈ ಕ್ಷೇತ್ರ ಜೆಡಿಎಸ್ ಭದ್ರ ಬುನಾದಿ. 2013ರಲ್ಲೂ ಕೇವಲ 3 ಸಾವಿರ ಮತಗಳಲ್ಲಿ ಸೋತಿದ್ದೇವೆ. 2018, 23ರಲ್ಲಿ ನಿರಂತರವಾಗಿ ಗೆದ್ದಿದ್ದೇವೆ.
ದಲಿನಿಂದಲೂ ಇದು ಜನತಾದಳದ ಭದ್ರಕೋಟೆ. ನಮ್ಮಲ್ಲಿನ ಕೆಲವೊಂದಷ್ಟು ತಿಕ್ಕಾಟಕ್ಕೆ ಸ್ವಲ್ಪ ವೀಕ್ ಆಗಿದೆ. ಈಗ ಕಾರ್ಯಕರ್ತರು ಬಲಾಡ್ಯವಾಗಿ ಸಂಘಟನೆ ಮಾಡುತ್ತಿದ್ದಾರೆ. ಅದರಿಂದ ಅವರ ವಿಶ್ವಾಸ ಇಲ್ಲದೇ ಏನು ತೀರ್ಮಾನ ಮಾಡಲ್ಲ. ಕಾರ್ಯಕರ್ತರ ತೀರ್ಮಾನವೇ ಅಂತಿಮ ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರದಿಂದ ದ್ವೇಷದ ರಾಜಕಾರಣ ವಿಚಾರವಾಗಿ ಮಾತನಾಡಿದ್ದು, ಇದು ಸೇಡಿನ ರಾಜಕಾರಣ ಅಲ್ಲದೇ ಮತ್ತೇನು? ಪಾಪ ಪದೇ ಪದೇ ಕುಮಾರಸ್ವಾಮಿ ಮೇಲೆ ಎಫ್ಐಆರ್ ಇಲ್ವಾ ಅಂತಾರೆ. ಕುಮಾರಸ್ವಾಮಿ ಯಾಕೆ ರಾಜಿನಾಮೆ ಕೊಟ್ಟಿಲ್ಲ ಅಂತ ಕೇಳುತ್ತಾರೆ. ಕುಮಾರಸ್ವಾಮಿ ಮೇಲಿನ ಎಫ್ಐಆರ್ಗೆ ಬೇಲ್ ಪಡೆದಿದ್ದೇನೆ. ನಾನು ನನ್ನ ಮೇಲೆ ತನಿಖೆ ಮಾಡಬೇಡಿ ಅಂತ ಹೇಳಿದ್ದೀನಾ? ಎಂದು ಗುಡುಗಿದ್ದಾರೆ.