ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಮತ್ತೊಮ್ಮೆ ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗಿದ್ದಾರೆ.
ನಬಾರ್ಡ್ ಅನ್ಯಾಯ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಮಾತಾಡಲಿ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾತನಾಡಿದ ಅವರು, ಸಿಎಂ ಮತ್ತು ಮಂತ್ರಿಗಳು ಕೇಂದ್ರ ಹಣಕಾಸು ಸಚಿವರನ್ನ ಭೇಟಿಯಾಗಿದ್ದರು. ಇದರ ಬಗ್ಗೆ ಚರ್ಚೆ ಮಾಡಿದ್ದಾರೆ. ಇದರಲ್ಲಿ ನಾನೇನು ಮಾತನಾಡಬೇಕು. ಸಿದ್ದರಾಮಯ್ಯ ಕರ್ನಾಟಕದ ಯಾವ ಹಿತ ಕಾಪಾಡಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ನಿಮ್ಮನ್ನ 136 ಸೀಟು ಕೊಟ್ಟು ಕೂರಿಸಿರೋದು ಯಾಕೆ? ರೈತರಿಗೆ ಏನು ಅನ್ಯಾಯ ಆಗಿದೆ. ಅವರಿಗೆ ನ್ಯಾಯ ಒದಗಿಸುವ ಕಾರ್ಯ ಮಾಡಿ ಎಂದು ಗುಡುಗಿದ್ದಾರೆ.
HMT ಲ್ಯಾಂಡ್ ಅನ್ನ ತಕರಾರು ತೆಗೆದುಕೊಂಡು ಕೂತಿದ್ದಾರೆ. ಅಭಿವೃದ್ಧಿ ಬಗ್ಗೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ನಿಂದ ದೇವೇಗೌಡರು, ಕುಮಾರಸ್ವಾಮಿ ಕಲಿಬೇಕಿಲ್ಲ. ಅಭಿವೃದ್ಧಿ ಹೇಗೆ ಮಾಡಬಹುದು ಅಂತ ನಾವು ಅಧಿಕಾರದಲ್ಲಿ ಇದ್ದಾಗ ಮಾಡಿ ತೋರಿಸಿದ್ದೇವೆ ಎಂದು ಹೇಳಿದ್ದಾರೆ.