ಮಂಗಳೂರು : ನಗರದ ಮುಲ್ಕಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ, ಮಾರಾಟಕ್ಕೆ ಯತ್ನಿಸುತ್ತಿದ್ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಲಾಗಿದೆ.
ಮಂಗಳವಾರ (ಮೇ.12) ಮೂಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಸುಹಾನ(21)ಳನ್ನು ಬಂಧಿಸಲಾಗಿದೆ. ಬಂಧಿತೆ ಶಿವಮೊಗ್ಗದ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾಗಿದ್ದು, ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ BCA ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.
ಬಂಧಿತಳಿಂದ ಸುಮಾರು 1 ಕೆಜಿ 42 ಗ್ರಾಂ ತೂಕದ ಹೈಡ್ರೋವಿಡ್ ಗಾಂಜಾ, ಮೊಬೈಲ್ ಫೋನ್ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿತೆಯು ಈ ಮಾದಕ ವಸ್ತುವನ್ನು ಚೆನ್ನೈಯಿಂದ ತರಿಸಿಕೊಂಡು ಮಂಗಳೂರಲ್ಲಿ ಅಕ್ರಮವಾಗಿ ಮಾರಾಟ ಮಾಡಿ ಹಣ ಗಳಿಸುವ ಉದ್ದೇಶ ಹೊಂದಿದ್ದಳು ಎಂದು ತಿಳಿದುಬಂದಿದೆ.
ಆರೋಪಿತೆಯ ಮೇಲೆ ಕಾವೂರು ಪೊಲೀಸ್ ಠಾಣೆ ಯಲ್ಲಿ NDPS Act ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ಕಸ್ಟಮ್ ನಲ್ಲೂ NDPS Act ಅಡಿ ಪ್ರಕರಣ ದಾಖಲಾಗಿವೆ.
ಇದನ್ನೂ ಓದಿ : ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್ಮೇಲ್ ಕೇಸ್‌ಗೆ ರೋಚಕ ಟ್ವಿಸ್ಟ್ – ಗಂಡನ ಕಾಮಪುರಾಣ ಬಿಚ್ಚಿಟ್ಟ ಪತ್ನಿ!


















