ಬೆಂಗಳೂರು: ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 96 ಹುದ್ದೆಗಳ ನೇಮಕಾತಿಗಾಗಿ (KVAFSU Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 96 ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ
ಒಟ್ಟು ಹುದ್ದೆಗಳು: 96
ಉದ್ಯೋಗ ಸ್ಥಳ: ಬೀದರ್, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 20
ಹುದ್ದೆಗಳ ಹೆಸರು: ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್
20 ಪ್ರೊಫೆಸರ್, 22 ಅಸೋಸಿಯೇಟ್ ಪ್ರೊಫೆಸರ್ ಹಾಗೂ 54 ಅಸಿಸ್ಟಂಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಪಿಎಚ್.ಡಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.18 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ kvafsu.edu.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು



















