ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿರುವ ಕೇಂದ್ರೀಯ ವಿದ್ಯಾಲಯ ಸಂಘಟನಾ (KVS Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಟ್ರೇನ್ಡ್ ಗ್ರ್ಯಾಜುಯೇಟ್ ಟೀಚರ್ (ಟಿಜಿಟಿ), ಮ್ಯೂಸಿಕ್ ಟೀಚರ್ ಹಾಗೂ ಕಂಪ್ಯೂಟರ್ ಇನ್ಸ್ಟ್ರಕ್ಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರೀಯ ವಿದ್ಯಾಲಯ ಸಂಘಟನೆ, ಗೌರಿಬಿದನೂರು
ಹುದ್ದೆ ಹೆಸರು: ಟ್ರೇನ್ಡ್ ಗ್ರ್ಯಾಜುಯೇಟ್ ಟೀಚರ್ (ಟಿಜಿಟಿ) ಹಾಗೂ ಕಂಪ್ಯೂಟರ್ ಇನ್ಸ್ಟ್ರಕ್ಟರ್
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ಗೌರಿಬಿದನೂರು, ಚಿಕ್ಕಬಳ್ಳಾಪುರ ಜಿಲ್ಲೆ
ಸಂದರ್ಶನದ ದಿನಾಂಕ: ಏಪ್ರಿಲ್ 8
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮೊದಲಿಗೆ gauribidanur.kvs.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಅಧಿಸೂಚನೆಯಲ್ಲಿ ಉಲ್ಲೇಖಿಸಲಾದ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ನಿಗದಿತ ದಿನಾಂಕದಂದು ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
Kendriya Vidyalaya Sangathan Gauribidanur Sericulture Office Building, Gauribidanur – 561208. 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವವರು ಏಪ್ರಿಲ್ 8ರಂದು ಬೆಳಗ್ಗೆ 9 ಗಂಟೆಯಿಂದ 10.30ರೊಳಗೆ ರಿಪೋರ್ಟ್ ಮಾಡಿಕೊಳ್ಳಬೇಕು ಎಂದು ಕೂಡ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : ಕೇಂದ್ರ ಸರ್ಕಾರದ ECIL ಸಂಸ್ಥೆಯಲ್ಲಿ 32 ಹುದ್ದೆಗಳು ಖಾಲಿ.. ಕರ್ನಾಟಕದ 2 ಜಿಲ್ಲೆಗಳಲ್ಲಿ ನೇಮಕ!



















