ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಹುಬ್ಬಳ್ಳಿಯಲ್ಲಿರುವ ಕೇಂದ್ರೀಯ ವಿದ್ಯಾಲಯ ಸಂಘಟನಾ (KVS Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವೊಕೇಷನಲ್ ಇನ್ಸ್ಟ್ರಕ್ಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದರೊಂದಿಗೆ ಹುಬ್ಬಳ್ಳಿಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಂತಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರೀಯ ವಿದ್ಯಾಲಯ ಸಂಘಟನೆ, ಹುಬ್ಬಳ್ಳಿ
ಹುದ್ದೆ ಹೆಸರು: ವೊಕೇಷನಲ್ ಇನ್ಸ್ಟ್ರಕ್ಟರ್
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ಹುಬ್ಬಳ್ಳಿ
ಸಂದರ್ಶನದ ದಿನಾಂಕ: ಸೆಪ್ಟೆಂಬರ್ 26
ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಬಿ.ಇ, ಬಿ.ಟೆಕ್, ಎಂ.ಇ, ಎಂಟೆಕ್ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ 18ರಿಂದ 65 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮೊದಲಿಗೆ no2hubli.kvs.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಅಧಿಸೂಚನೆಯಲ್ಲಿ ಉಲ್ಲೇಖಿಸಲಾದ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ನಿಗದಿತ ದಿನಾಂಕದಂದು ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
PM Shri Kendriya Vidyalaya No. 2, Hubballi, Campus.
ಇದನ್ನೂ ಓದಿ : ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!


















