ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ದೇಶಾದ್ಯಂತ ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಕೇಂದ್ರೀಯ ವಿದ್ಯಾಲಯ ಸಂಘಟನಾ (KVS Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 2,499 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಕೇಂದ್ರೀಯ ವಿದ್ಯಾಲಯ ಸಂಘಟನೆ
ಹುದ್ದೆ ಹೆಸರು: ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ
ಒಟ್ಟು ಹುದ್ದೆ: 2,499
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 26
ದೇಶಾದ್ಯಂತ ಇರುವ ವಿದ್ಯಾಲಯ ಸಂಘಟನಾ ಶೈಕ್ಷಣಿಕ ಸಂಶ್ಥೆಗಳಲ್ಲಿ ಪ್ರಾಂಶುಪಾಲ, ಉಪ ಪ್ರಾಂಶುಪಾಲ, ಫೈನಾನ್ಸ್ ಆಫೀಸರ್, ಅಸಿಸ್ಟಂಟ್ ಸೆಕ್ಷನ್ ಆಫೀಸರ್, ಹೆಡ್ ಮಾಸ್ಟರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ, ಬಿ.ಕಾಂ, ಬಿ.ಎಡ್, ಸಿಎ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ kvsangathan.nic.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅರ್ಜಿಯನ್ನು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಇದನ್ನೂ ಓದಿ : ಆಸ್ತಿ ಕೊಳ್ಳಲು ಹಣ ಸಹಾಯ ಮಾಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ | ಬ್ರಹ್ಮಾನಂದ ಗುರೂಜಿ ವಿರುದ್ಧ ಆರೋಪ


















