ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪ ಸದಸ್ಯ ಸೂರಜ್ ರೇವಣ್ಣಗೆ ಸಂಕಷ್ಟ ಶುರುವಾಗಿದೆ. ತಮ್ಮ ವಿರುದ್ಧ ಕೇಳಿ ಬಂದಿದ್ದ ಆರೋಪ ಮುಕ್ತಗೊಳಿಸುವಂತೆ ಕೋರಿ ಸೂರಜ್ ಅರ್ಜಿ ಸಲ್ಲಿಸಿದ್ದರು. ಆದರೆ, ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.
ಈ ಹಿಂದೆ ಕೂಡ ಡಿಶ್ಚಾರ್ಜ್ ಅರ್ಜಿಯನ್ನು ಕೂಡ 42ನೇ ಎಸಿಜೆಎಂ ಕೋರ್ಟ್ ವಜಾ ಮಾಡಿತ್ತು. ಈ ಅರ್ಜಿಯನ್ನೇ ಪ್ರಶ್ನಿಸಿ ಸೂರಜ್ ರೇವಣ್ಣ ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದರು. ಈಗ ಅರ್ಜಿ ವಜಾಗೊಳಿಸಿರುವ ನ್ಯಾಯಾಲಯ, ಎಸಿಜೆಎಂ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.
ಸೂರಜ್ ರೇವಣ್ಣ ವಿರುದ್ಧ 2024ರ ಜೂ.ನಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿತ್ತು. ನಾನು ಪ್ರಜ್ವಲ್ ರೇವಣ್ಣ ಪರ ಚುನಾವಣೆಯಲ್ಲಿ ಕೆಲಸ ಮಾಡಿದ್ದೆ. ಆ ವೇಳೆ ಸೂರಜ್ ರೇವಣ್ಣ ನನಗೆ ಪರಿಚಯವಾಗಿದ್ದರು. ಆಗ ನನ್ನ ನಂಬರ್‌ನೂ ಪಡೆದಿದ್ದರು. ನಂತರ ಜೂ. 14ರಂದು ನನಗೆ ಮೆಸೇಜ್ ಮಾಡಿ ನನ್ನ ಬಗ್ಗೆ ಮಾಹಿತಿ ಪಡೆದಿದ್ದರು. ಜೂ.16 ರಂದು ಹೊಳೆನರಸೀಪುರ ತಾಲೂಕಿನ, ಗನ್ನೀಕಡ ತೋಟಕ್ಕೆ ಸಂಜೆ ಬರಲು ಹೇಳಿದ್ದರು. ನಾನು ಹೋದ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದರು. ನನಗೆ ಇಷ್ಟವಿಲ್ಲದಿದ್ದರೂ ಲೈಂಗಿಕ ಕಿರುಕುಳ ನೀಡಿದ್ದಾರೆ. ನನಗೆ ಪುರುಷರನ್ನ ಕಂಡರೆ ಆಸಕ್ತಿ ಮಹಿಳೆಯರನ್ನು ಕಂಡರೆ ಆಸಕ್ತಿ ಇಲ್ಲ ಎಂದು ದೌರ್ಜನ್ಯ ಎಸಗಿದ್ದಾರೆಂದು ಸಂತ್ರಸ್ತ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಈ ಕೇಸ್‌ನ ಸಂಕಷ್ಟ ಸೂರಜ್ ರೇವಣ್ಣಗೆ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 ( ಬೆದರಿಕೆ) ಯಡಿ ದೂರು ದಾಖಲಾಗಿದೆ.
ಇದನ್ನೂ ಓದಿ : ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?



















