ಬಾಗಲಕೋಟೆ : ಬಾಗಲಕೋಟೆಯಲ್ಲಿ ದೇವದಾಸಿಯರಿಗೆ, ವಿಕಲಚೇತನರಿಗೆ ಸಮರ್ಪಕ ಹಕ್ಕು ಪತ್ರ ನೀಡದ ಹಿನ್ನೆಲೆಯಲ್ಲಿ ಬಿಟಿಡಿಎ ಅಧ್ಯಕ್ಷ, ಶಾಸಕ ಹೆಚ್ ವೈ ಮೇಟಿ ಅವರ ಮನೆಯ ಮುಂದೆ ಡಿ.ಎಸ್.ಎಸ್ ಕಾರ್ಯಕರ್ತರು ತಡರಾತ್ರಿ ಪ್ರತಿಭಟನೆ ನಡೆಸಿದರು.
ನಿಷೇದಾಜ್ಞೆ ಹಿನ್ನೆಲೆ ಪೊಲೀಸರು ಪ್ರತಿಭಟನೆಯನ್ನು ತಡೆದಿದ್ದಾರೆ. ನಂತರ ನವನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಬಿಟಿಡಿಎ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ.
ಆಲಮಟ್ಟಿಯ ಸಂತ್ರಸ್ತರಾಗಿರುವ ವಿಕಲಚೇತನರು, ಸಫಾಯಿ ಕರ್ಮಚಾರಿಗಳು, ದೇವದಾಸಿಯರಿಗೆ 20 ವರ್ಷ ಕಳೆದರೂ ಸಂತ್ರಸ್ತರಿಗೆ ಹಕ್ಕುಪತ್ರ ನೀಡದ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೆ ಹಕ್ಕು ಪತ್ರ ನೀಡಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.