ಬೆಳಗಾವಿ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆದ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟಗಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವಿಷಯವಾಗಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಜಿಲ್ಲಾಧಿಕಾರಿ ತೆಗೆದುಕೊಂಡಿರುವ ನಿರ್ಧಾರ ಸರಿ ಇದೆ ಎಂದಿದ್ದಾರೆ.
ಅಲ್ಲದೇ, ಜಿಲ್ಲಾಧಿಕಾರಿ ಅವರಿಂದ ಲಾಠಿಚಾರ್ಜ್ ವಿಷಯವಾಗಿ ಸಂಪೂರ್ಣ ಮಾಹಿತಿ ಪಡೆದು, ಗಲಾಟೆಯ ಸಂಪೂರ್ಣ ವಿಡಿಯೋ ನೋಡಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಅವರು ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ. ಹೈಕೋರ್ಟ್ ಹೋರಾಟಕ್ಕೆ ಅನುಮತಿ ನೀಡಿತ್ತು. ಆದರೆ, ಆ ಜಾಗ ಬಿಟ್ಟು ಬೇರೆ ಕಡೆ ಹೋಗದಂತೆ ಹಾಗೂ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಆದರೆ, ಹೈಕೋರ್ಟ್ ಆದೇಶ ಉಲ್ಲಂಘಿಸಲಾಗಿದೆ. ಹೀಗಾಗಿ ಲಾಠಿ ಚಾರ್ಜ್ ಮಾಡಲಾಯಿತು ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದ್ದಾರೆ.