ಧಾರವಾಡ: ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠವು ಸರ್ಕಾರ, ಗೃಹ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.
ಲಾಠಿಚಾರ್ಜ್ ವಿರುದ್ಧ ಜಯಮೃತ್ಯುಂಜಯ ಶ್ರೀ, ಪಂಚಮಸಾಲಿ ವಕೀಲರ ಪರಿಷತ್ ಧಾರವಾಡ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ರಿಟ್ ಅರ್ಜಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಜಯಮೃತ್ಯುಂಜಯ ಶ್ರೀ, ಲಾಠಿಚಾರ್ಜ್ ಮಾಡಿದ ನಂತರ 12 ಜನರ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ಎಫ್ ಐಆರ್ ರದ್ದುಪಡಿಸಬೇಕೆಂದು ನಾವು ಸರ್ಕಾರಕ್ಕೆ ಮನವಿ ಮಾಡಿದ್ದೇವು.
ಅಲ್ಲದೇ, ಕ್ಷಮೆ ಕೇಳುವಂತೆ ಕೂಡ ಕೇಳಲಾಗಿತ್ತು. ಆದರೆ, ಯಾವುದಕ್ಕೂ ಸಿಎಂ ಸ್ಪಂದಿಸಿಲ್ಲ. ಹೀಗಾಗಿ ಕೋರ್ಟ್ ಮೊರೆ ಹೋಗಿದ್ದೇವೆ ಎಂದು ಹೇಳಿದ್ದಾರೆ.