ಬೆಂಗಳೂರು: ಕರ್ನಾಟಕ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮದ ವೆಬ್ಸೈಟ್ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಸಚಿವರಾದ ರಾಮಲಿಂಗಾರೆಡ್ಡಿ, ಸಂತೋಷ್ ಲಾಡ್ ಹಾಗೂ ನಿಗಮದ ಅಧ್ಯಕ್ಷ ಶ್ರೀನಿವಾಸ್ ವೇಲು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ದೀಪ ಬೆಳಗಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕುಂಬಾರ ಸಮುದಾಯದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಯ ಉದ್ದೇಶದಿಂದ ಈ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಸ್ವಯಂ ಉದ್ಯೋಗ ನೇರ ಸಾಲ, ಅರಿವು ಶೈಕ್ಷಣಿಕ ಸಾಲ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಗಳ ಮೂಲಕ ಸಮುದಾಯದ ಜನರಿಗೆ ಆರ್ಥಿಕ ನೆರವು, ಶಿಕ್ಷಣ ಮತ್ತು ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡುವ ಗುರಿಯನ್ನು ನಿಗಮ ಹೊಂದಿದೆ. ಈ ಮೂಲಕ ಕುಂಬಾರ ಸಮುದಾಯದ ಜೀವನಮಟ್ಟ ಸುಧಾರಣೆಗೆ ನಿಗಮ ಮುಂದಾಗಿದೆ.


















