ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳದ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಲಾಯರ್ ಜಗದೀಶ್ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ ಕಾಡುತ್ತಿದ್ದು ಇದರಿಂದ ಪೊಲೀಸ್ ಭದ್ರತೆ ನೀಡಬೇಕಾಗಿ ವಿನಂತಿ ಮಾಡಿದ್ದ ಕಾರಣ ಇಬ್ಬರು ಪೊಲೀಸರ ಜೊತೆ ಲಾಯರ್ ಜಗದೀಶ್ ಮಧ್ಯಾಹ್ನ ಸುಮಾರು 1:45ಕ್ಕೆ ಹಾಜರಾಗಿದ್ದಾರೆ.
ವಿಚಾರಣೆ ನಡೆಯುತ್ತಿದೆ. ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬ್ರಹ್ಮಾವರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬಂದಿದ್ದಾರೆ.



















