ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಅಧಿಕಾರಿಗಳು ಹೈಕೋರ್ಟ್ ಗೆ ಅಂತಿಮ ವರದಿ ಸಲ್ಲಿಸಿದ್ದಾರೆ.
ಭೋವಿ ನಿಗಮ ಹಗರಣ (Bhovi Corporation Scam) ಕ್ಕೆ ಸಂಬಂಧಿಸಿದಂತೆ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ (SIT) ಅಧಿಕಾರಿಗಳು ಒಟ್ಟು 2,300 ಪುಟಗಳ ಅಂತಿಮ ವರದಿಯನ್ನು ಸಿದ್ಧಪಡಿಸಿ ಹೈಕೋರ್ಟ್ಗೆ ಸಲ್ಲಿಸಿದ್ದಾರೆ. ಐಪಿಎಸ್ ಅಧಿಕಾರಿಗಳಾದ ವಿನಾಯಕ್ ವರ್ಮಾ, ಅಕ್ಷಯ್ ಮಚೀಂದ್ರ, ನಿಶಾ ಜೇಮ್ಸ್ ನೇತೃತ್ವದ ವಿಶೇಷ ತನಿಖಾ ತಂಡದಿಂದ ವರದಿ ಸಲ್ಲಿಕೆಯಾಗಿದೆ.
ವರದಿಯಲ್ಲಿ ಜೀವಾಗೆ ಡಿವೈಎಸ್ಪಿ ಕನಕಲಕ್ಷ್ಮೀ ಕಿರುಕುಳ, ಹಿಂಸೆ ನೀಡಿರುವುದು ಸಾಬೀತಾಗಿದೆ. ಹೈಕೋರ್ಟ್ ಸೂಚನೆಯಂತೆ ಎಸ್ಐಟಿಯಿಂದ ವರದಿ ಸಲ್ಲಿಕೆಯಾಗಿದ್ದು, ತನಿಖಾ ತಂಡದ ವರದಿಗೆ ಹೈಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿದೆ.
ಜೀವಾ ವಿಚಾರಣೆ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದ್ದ ಕೆಲವು ವಿಡಿಯೋಗಳು ಡಿಲೀಟ್ ಆಗಿದ್ದವು. ಜೀವಾರನ್ನು ವಿವಸ್ತ್ರಗೊಳಿಸಿರುವುದು ಸೇರಿದಂತೆ ಕೆಲವು ವಿಡಿಯೋಗಳು ಇರಲಿಲ್ಲ. ಎಫ್ಎಸ್ಎಲ್ ಮೂಲಕ ಮರು ಸಂಗ್ರಹಿಸಿದಾಗ ಆ ವಿಡಿಯೋಗಳು ಪತ್ತೆಯಾಗಿದ್ದವು. ಅಲ್ಲದೇ, ಡೆತ್ ನೋಟ್ ಜೀವಾ ಮಾಡಿದ್ದ ಕೆಲವು ಆರೋಪಗಳು ಸಾಬೀತಾಗಿವೆ. ವಕೀಲೆ ಜೀವಾ ಆತ್ಮಹತ್ಯೆ ನಡೆದಿತ್ತು. ಡಿವೈಎಸ್ಪಿ ಕನಕಲಕ್ಷ್ಮೀ ಕಿರುಕುಳದ ಕುರಿತು 13 ಪುಟಗಳ ಡೆತ್ ನೋಟ್ ನಲ್ಲಿ ಜೀವಾ ಬರೆದಿದ್ದರು. ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಬನಶಂಕರಿ ಠಾಣೆಯಿಂದ ಪ್ರಕರಣ ಎಸ್ ಐಟಿಗೆ ವರ್ಗಾವಣೆಯಾಗಿತ್ತು. ಆನಂತರ ಎಸ್ ಐಟಿ ರಚಿಸಲಾಗಿತ್ತು.



















