ಬೆಂಗಳೂರು: ವಕೀಲೆ ಜೀವ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಕನಕಲಕ್ಷ್ಮೀ ಅರೆಸ್ಟ್ ಆಗಿದ್ದಾರೆ.
ಜೀವ ಆತ್ಮಹತ್ಯೆಗೂ ಮುನ್ನ ಡಿವೈಎಸ್ಪಿ ಕನಕಲಕ್ಷ್ಮೀ ವಿರುದ್ಧ ಆರೋಪ ಮಾಡಿದ್ದರು. ನನ್ನ ಸಾವಿಗೆ ಅವರೇ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದರು ಎನ್ನಲಾಗಿದೆ. ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಎಸ್ ಐಟಿ ಅಧಿಕಾರಿಗಳು ಈಗ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ರಾಜ್ಯ ಮಾನವ ಹಕ್ಕುಗಳ ಆಯೋಗದ ಡಿವೈಎಸ್ಪಿ ಸುಧೀರ್ ಹೆಗಡೆಯಿಂದ ಕನಕಲಕ್ಷ್ಮಿ ಅರೆಸ್ಟ್ ಆಗಿದ್ದಾರೆ. ನನ್ನ ಆತ್ಮಹತ್ಯೆಗೆ ಕನಕಲಕ್ಷ್ಮಿ ಕಾರಣ ಎಂದಿದ್ದ ಜೀವಾ, 13 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ.