ದಾವಣಗೆರೆ: ಚನ್ನಗಿರಿಯಲ್ಲಿ ಅಮ್ಜದ್ ಲೈಂಗಿಕ ಕರ್ಮಕಾಂಡ ಮಾಸುವ ಮುನ್ನವೇ ಮತ್ತೊಂದು ಲೈಂಗಿಕ ಕಿರುಕುಳ ಆರೋಪ ಬೆಳಕಿಗೆ ಬಂದಿದೆ.
ಜಿಲ್ಲೆಯ ಚನ್ನಗಿರಿ ಪಟ್ಟಣದ ಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಹೀಗಾಗಿ ಉಪನ್ಯಾಸಕನನ್ನು ವಿದ್ಯಾರ್ಥಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿರುವ ಮುರುಳಿ ಎಂಬಾತ ಬಿಎಸ್ಸಿ ವಿಭಾಗದ ವಿದ್ಯಾರ್ಥಿನಿಗೆ ಕಾಲ್ ಹಾಗೂ ಮೆಸೇಜ್ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.
ಪ್ರತಿ ದಿನ ಐ ಲವ್ ಯು, ಡೇಟಿಂಗ್ ಸೇರಿದಂತೆ ವಿದ್ಯಾರ್ಥಿನಿಗೆ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಆ ವಿದ್ಯಾರ್ಥಿನಿ ನನಗೆ ಮದುವೆ ಫಿಕ್ಸ್ ಆಗಿದೆ ಎಂದು ಮೆಸೇಜ್ ಮಾಡಿದರೂ ಉಪನ್ಯಾಸಕ ಟಾರ್ಚರ್ ನೀಡಿ ಅಶ್ಲೀಲವಾದ ಪೋಟೋ ಕಳುಹಿಸಿ ಟಾರ್ಚರ್ ಮಾಡುತ್ತಿದ್ದನಂತೆ. ಆ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಚನ್ನಗಿರಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.