ರಾಮನಗರ: ಚಿರತೆ ದಾಳಿಯಿಂದಾಗಿ 10ಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ಗ್ರಾಮದ ಮದುಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಗ್ರಾಮದ ಚಂದ್ರು ಎಂಬ ರೈತನಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ಶೆಡ್ ನಲ್ಲಿ ಇದ್ದ ಕುರಿ ಹಿಂಡಿನ ಮೇಲೆ ಚಿರತೆ ದಾಳಿ ನಡೆಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.