ಮೈಸೂರು: ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ ಮಾಡಿದ್ದು, ಮಗು ಸೇರಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದಾಳಿಗೊಳಗಾದ ದಂಪತಿಗಳು ಕೊಣನೂರು ರಸ್ತೆಯಲ್ಲಿ ಜಮೀನಿಗೆ ತೆರಳಿದ್ದ ವೇಳೆ ಏಕಾಏಕಿ ಚಿರತೆ ದಾಳಿ ಮಾಡಿದ್ದರಿಂದ ಬೈಕ್‌ನಿಂದ ಕೆಳಗೆ ಬಿದ್ದ ದಂಪತಿಗಳು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಕಳೆದ ಕೆಲ ತಿಂಗಳಿಂದ ಗ್ರಾಮದಲ್ಲಿ ಉಪಟಳ ನೀಡುತ್ತಿರುವ ಚಿರತೆಯನ್ನು ಸೆರೆ ಹಿಡಿಯುವಂತೆ ರೈತರು ಅರಣ್ಯ ಇಲಾಖೆಯವರನ್ನು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ರಾಜ್ಯಶಾಸ್ತ್ರದಲ್ಲಿ ಪಿಎಚ್ಡಿ ಪದವಿ ಪಡೆದ BJP ಎಂಎಲ್‌ಸಿ ಸಿ.ಟಿ.ರವಿ!



















