ದಕ್ಷಿಣ ಕನ್ನಡ : ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಗ್ರಾಮದ ಪರಂಪಾಡಿ–ಅರಂಪಾಡಿ ಪ್ರದೇಶದಲ್ಲಿ ಚಿರತೆ ಕಾಟ ಮತ್ತೆ ಹೆಚ್ಚಳವಾಗಿದ್ದು, ತಡರಾತ್ರಿ ನಡೆದ ಘಟನೆ ಸ್ಥಳೀಯರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ.
ಅರಂಪಾಡಿ ನಿವಾಸಿ ಈಶ್ವರಗೌಡ ಅವರ ಮನೆಯ ಅಂಗಳದಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಈ ಘಟನೆ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದ್ದು, ದೃಶ್ಯಗಳು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.
ಕೆಲವೇ ದಿನಗಳ ಹಿಂದೆ ಕಿಶೋರ್ ಪರಂಪಾಡಿ ಅವರ ಮನೆಯ ನಾಯಿಯನ್ನೂ ಚಿರತೆ ಬಲಿ ತೆಗೆದುಕೊಂಡಿತ್ತು. ಇದೀಗ ಅರಂಪಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಸಂಚಾರ ಹೆಚ್ಚಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪ್ರದೇಶವು ದಟ್ಟ ಕಾಡು ಪ್ರದೇಶಕ್ಕೆ ಸಮೀಪ ಇರುವುದರಿಂದ ರಾತ್ರಿ ವೇಳೆ ರಸ್ತೆಗಳಲ್ಲಿ ಸಂಚರಿಸುವುದು ಅಪಾಯಕಾರಿಯಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಕ್ಷಣವೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಗೆಲುವಿನ ಸಂಭ್ರಮದಲ್ಲಿ ಆರ್ಚರ್ ತುಂಟಾಟ.. ಜಡೇಜಾ ಕೇಕ್ ಕತ್ತರಿಸುವಾಗ ಶಾಂಪೇನ್ ಬಾಟಲಿ ಎಸ್ಕೇಪ್!


















