ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಚಿರತೆ ಕಳೇಬರ ಪತ್ತೆಯಾಗಿದೆ. ಮುಳ್ಳುಹಂದಿಯನ್ನು ಬೇಟೆಯಾಡಲು ಬಂದಿದ್ದ ಚಿರತೆಗೆ ಅದರ ಮುಳ್ಳುಗಳು ಚುಚ್ಚಿದ ಪರಿಣಾಮ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಬೊಮ್ಮನಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಕರಿಕಲ್ಲು ಕ್ವಾರಿ ಸಮೀಪ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ – FIR ದಾಖಲು


















