ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ವೆಂಕಟಗಿರಿ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಬಲೆಗೆ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಒಂದೂವರೆ ವರ್ಷದ ಚಿರತೆ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ಸ್ಥಳಕ್ಕೆ ಗಂಗಾವತಿ ವಲಯದ ಅರಣ್ಯಾಧಿಕಾರಿ ಸುಭಾಷ್ ಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.