ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟ ಮಾರ್ಗದ 5ನೇ ತಿರುವಿನಲ್ಲಿ ಚಿರತೆ ಕಾಣಿಸಿಕೊಂಡಿದೆ.
ವಾಹನ ಸವಾರರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಚಿರತೆಯ ಚಿತ್ರ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಈಗಾಗಲೇ ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತ ಅರಣ್ಯ ಇಲಾಖೆ ಚಿರತೆ ಸೆರೆಗೆ ಬೋನುಗಳನ್ನು ಅಳವಡಿಸಿತ್ತು. ಇದೀಗ ಶಿವರಾತ್ರಿ ಕೂಡ ಮುಕ್ತಾಯವಾದ ಹಿನ್ನೆಲೆ ಪಾದಯಾತ್ರೆಯ ಮೂಲಕ ಹೋಗುವವರಿಗೆ ಜಾಗೃತಿ ಮೂಡಿಸಬೇಕಿದೆ. ಅಲ್ಲದೇ, ಅವರ ರಕ್ಷಣೆಗೂ ಕೂಡ ಆದ್ಯತೆ ಕೊಡಬೇಕಿದೆ.
ಇದನ್ನೂ ಓದಿ : ಬಾಗಲಕೋಟೆಯಲ್ಲಿ ಭೀಕರ ಅಪಘಾತ | ಮಗು ಸೇರಿ ನಾಲ್ವರ ಬ*ಲಿ



















