ಬೆಂಗಳೂರು : ರಾಜಧಾನಿ ಬೆಂಗಳೂರಿನ ಬನಶಂಕರಿ 6ನೇ ಹಂತದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ. ಕೇಶವ್ ಎಂಬುವವರ ಮನೆಯ ಮುಂಭಾಗದಲ್ಲಿ ಚಿರತೆ ಓಡಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಯ ಬಳಿ ಚಿರತೆ ಹೆಜ್ಜೆ ಗುರುತುಗಳೂ ಪತ್ತೆಯಾಗಿದ್ದು, ನಾಯಿ ಹಿಡಿಯಲು ಬಂದಿದ್ದ ಚಿರತೆ ನಾಯಿ ಬೊಗಳುತ್ತಿದ್ದಂತೆ ಸ್ಥಳದಿಂದ ಕಾಲ್ಕಿತ್ತಿದೆ.
ಬನಶಂಕರಿ 2ನೇ ಹಂತದಲ್ಲಿ ಜುಲೈ ತಿಂಗಳಲ್ಲೂ ಚಿರತೆ ಕಾಣಿಸಿಕೊಂಡಿತ್ತು. ಇದೀಗ ಮತ್ತೆ ಅದೇ ವ್ಯಾಪ್ತಿಯಲ್ಲಿ ಚಿರತೆ ಪತ್ತೆಯಾಗಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮಕ್ಕಳನ್ನು ಹಾಗೂ ವಯೋವೃದ್ಧರನ್ನು ಮನೆಯಿಂದ ಹೊರಗೆ ಕಳುಹಿಸಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಯಾವುದೇ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿಯಬೇಕು ಎಂದು ಬನಶಂಕರಿ ನಿವಾಸಿಗಳು ಆಗ್ರಹಿಸಿದ್ದಾರೆ
ಇದನ್ನೂ ಓದಿ : ‘ಇಂಥ ದೊಡ್ಡ ಕ್ರಿಕೆಟಿಗನಾದರೂ ಸರಳ ವ್ಯಕ್ತಿ’ ; ಲಂಡನ್‌ನಲ್ಲಿ ಕೊಹ್ಲಿಯನ್ನು ಭೇಟಿಯಾದ ಏಕನಾಥ್ ಶಿಂಧೆ!



















