ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ತಂಡಗಳು ಭಾನುವಾರ ದುಬೈ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುವ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಗೆಲುವಿಗೆ ಸವಾಲೊಡ್ಡಲಿದೆ. ಈ ಪಂದ್ಯದ ಬಗ್ಗೆ ಕ್ರಿಕೆಟ್ ಕಾರಿಡಾರ್ನಲ್ಲಿ ಜೋರು ಚರ್ಚೆ ಶುರುವಾಗಿದೆ. ಈ ನಡುವೆ ಭಾರತದ ಅಭಿಮಾನಿಗಳು ಪಾಕ್ ಎದುರು ಟೀಮ್ ಇಂಡಿಯಾ ಗೆಲ್ಲಬೇಕೆಂದು ಬಯಸುತ್ತಿದೆ. ಆದರೆ, ಭಾರತ ತಂಡದ ಮಾಜಿ ವೇಗಿ ಅತುಲ್ ವಾಸನ್ ಅವರು ಈ ಪಂದ್ಯದಲ್ಲಿ ಭಾರತ ಸೋಲಲಿ ಎಂದಿದ್ದಾರೆ.
ಭಾರತದ ಮಾಜಿ ವೇಗಿ ಅತುಲ್ ವಾಸನ್, . “ದುಬೈನಲ್ಲಿ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಸೋತರೆ, ಟೂರ್ನಿ ಇನ್ನಷ್ಟು ರೋಮಾಂಚನಕಾರಿಯಾಗುತ್ತದೆ. ಏಕೆಂದರೆ ಭಾರತ ಮತ್ತು ಪಾಕಿಸ್ತಾನ ನಡುವೆ ಬಹಳ ಕಡಿಮೆ ಪಂದ್ಯಗಳು ನಡೆಯುತ್ತವೆ. ಒಂದು ವೇಳೆ ಪಾಕಿಸ್ತಾನ ತಂಡ ಸೋತು ಟೂರ್ನಿಯಿಂದ ಹೊರ ಬಿದ್ದರೆ ಚಾಂಪಿಯನ್ಸ್ ಟ್ರೋಪಿಯ ಕಿಮ್ಮತ್ತು ಹೊರಟು ಹೋತು್ತದೆ ಎಂದು ಹೇಳಿದ್ದಾರೆ.
ಕಾರಣ ತಿಳಿಸಿದ ಅತುಲ್
ಪಾಕಿಸ್ತಾನ ವಿರುದ್ಧ ಭಾರತ ತಂಡದ ಸೋಲಿಗೆ ಮಾಜಿ ಕ್ರಿಕೆಟಿಗ ಅತುಲ್ ವಾಸನ್ ವಿಶೇಷ ಕಾರಣ ನೀಡಿದ್ದಾರೆ. “ಪಾಕಿಸ್ತಾನ ತಂಡ ಭಾರತಕ್ಕಿಂತ ತುಂಬಾ ದುರ್ಬಲವಾಗಿದೆ. ಒಂದು ವೇಳೆ ಟೀಮ್ ಇಂಡಿಯಾ ಆತಿಥೇಯರ ವಿರುದ್ಧ ಏಕಪಕ್ಷೀಯ ಗೆಲುವು ಸಾಧಿಸಿದರೆ, ಟೂರ್ನಿಯ ರೋಮಾಂಚನ ಕೊನೆಗೊಳ್ಳುತ್ತದೆ.,” ಎಂದು ತಿಳಿಸಿದ್ದಾರೆ ಮಾಜಿ ವೇಗಿ.
“ಭಾರತ ವಿರುದ್ಧ ಸೋತರೆ ಪಾಕಿಸ್ತಾನ ಸೆಮಿಫೈನಲ್ ರೇಸ್‌ನಿಂದ ಹೊರಗುಳಿಯುತ್ತದೆ. ಒಂದು ವೇಳೆ ಗೆದ್ದರೆ ಅಭಿಮಾನಿಗಳು ಮತ್ತೊಮ್ಮೆ ಈ ಎರಡೂ ತಂಡಗಳ ನಡುವಿನ ಜಿದ್ದಾಜಿದ್ದಿಯನ್ನು ನೋಡುವ ಅವಕಾಶವನ್ನು ಪಡೆಯಲಿದ್ದಾರೆ. ಅದು ಕ್ರಿಕೆಟ್‌ಗೆ ಒಳ್ಳೆಯದು. ಅದಕ್ಕಾಗಿಯೇ ಫೆಬ್ರವರಿ 23 ರಂದು ನಡೆಯುವ ಪಂದ್ಯವನ್ನು ಪಾಕಿಸ್ತಾನ ಗೆಲ್ಲಬೇಕೆಂದು ನಾನು ಬಯಸುತ್ತೇನೆ,” ಎಂದು ಅತುಲ್ ವಾಸನ್ ಹೇಳಿದ್ದಾರೆ.
ಪಾಕಿಸ್ತಾನ ಪಂದ್ಯಕ್ಕೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ XI
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ/ಕುಲ್ದೀಪ್ ಯಾದವ್, ಹರ್ಷಿತ್ ರಾಣಾ ಮತ್ತು ಮೊಹಮ್ಮದ್ ಶಮಿ.
ಭಾರತ ಪಂದ್ಯಕ್ಕೆ ಪಾಕಿಸ್ತಾನ ತಂಡದ ಸಂಭಾವ್ಯ ಪ್ಲೇಯಿಂಗ್ XI
ಇಮಾಮ್ ಉಲ್ ಹಕ್, ಬಾಬರ್ ಆಝಮ್, ಕಮ್ರಾನ್ ಗುಲಾಮ್, ಮೊಹಮ್ಮದ್ ರಿಝ್ವಾನ್ (ನಾಯಕ, ವಿ.ಕೀ), ಸಲ್ಮಾನ್ ಅಘಾ, ಸೌದ್ ಶಕೀಲ್, ಖುಷ್ದಿಲ್ ಶಾ, ಶಾಹೀನ್ ಶಾ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್