ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರು ರಾಜ್ಯದ ದೀರ್ಘಾವಧಿಯ ಸಿಎಂ ಆಗಿ ದಾಖಲೆ ಬರೆಯಲಿ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwar) ಹಾರೈಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಈ 5 ವರ್ಷ ಪೂರ್ಣಗೊಳಿಸಿದರೆ ಸಹಜವಾಗಿ ಅದು ದಾಖಲೆ ಆಗಲಿದೆ ಎಂದು ಹೇಳಿದ್ದಾರೆ.
ಸಿಎಲ್ಪಿ ನಾಯಕರನ್ನಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದಾಗ ಹೈಕಮಾಂಡ್ ಯಾವುದೇ ಎರಡೂ ವರ್ಷದ ಕುರಿತು ಮಾತನಾಡಿಲ್ಲ. ಹೀಗಾಗಿ ನಾವೆಲ್ಲ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿಯೇ ಇರುತ್ತಾರೆ ಎಂದು ಭಾವಿಸಿದ್ದೇವೆ ಎಂದು ಹೇಳಿದ್ದಾರೆ.