ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಭಾರತೀಯ ಜೀವ ವಿಮಾ ನಿಗಮದಲ್ಲಿ (LIC AAO Recruitment 2025) ಖಾಲಿ ಇರುವ 350 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 8 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಜೀವ ವಿಮಾ ನಿಗಮ
ಖಾಲಿ ಇರುವ ಹುದ್ದೆಗಳು: 350
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 08
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 21 ವರ್ಷದಿಂದ 30 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 88,635 ರೂಪಾಯಿಯಿಂದ 1.26 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ.
ಮೊದಲಿಗೆ ಪೂರ್ವಭಾವಿ ಪರೀಕ್ಷೆ ಇರುತ್ತದೆ. ಇದಾದ ಬಳಿಕ ಮುಖ್ಯ ಪರೀಕ್ಷೆ, ನಂತರ ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಜನರಲ್, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 700 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 85 ರೂಪಾಯಿ ಶುಲ್ಕವಿದೆ. ಆಸಕ್ತಿ ಇರುವವರು https://licindia.in/ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.



















