ಬೆಂಗಳೂರು : ದೇಶದ ಬೃಹತ್ ಸಾರ್ವಜನಿಕ ವಲಯದ ವಿಮಾ ಸಂಸ್ಥೆಯಾಗಿರುವ ಭಾರತೀಯ ಜೀವ ವಿಮಾ ನಿಗಮದ (LIC HFL Junior Assistant Recruitment 2026) ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ 180 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 180 ಜೂನಿಯರ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್
ಹುದ್ದೆ ಹೆಸರು: ಜೂನಿಯರ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: 180
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 30
ಕರ್ನಾಟಕದ ಬೆಂಗಳೂರಿನಲ್ಲಿ 23, ಬೆಳಗಾವಿ, ಹಾಸನ, ಮಂಗಳೂರು, ಮೈಸೂರು ಹಾಗೂ ರಾಯಚೂರಿನಲ್ಲಿ ತಲಾ 1 ಹುದ್ದೆಗಳು ಖಾಲಿ ಇವೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಶೇ.55ರಷ್ಟು ಅಂಕಗಳೊಂದಿಗೆ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 21ರಿಂದ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 38,709 ರೂಪಾಯಿಯಿಂದ 41,509 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ 800 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://www.lichousing.com/careersಗೆ ಭೇಟಿ ನೀಡಬೇಕು
ಜೂನಿಯರ್ ಅಸಿಸ್ಟಂಟ್ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ನಲ್ಲಿ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!



















