ಬೆಂಗಳೂರು : ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪ್ರಜ್ವಲ್ ಪರ ವಕೀಲರು ಸಿದ್ದತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೇಲ್ಮನವಿ ಸಲ್ಲಿಸಲು 60 ದಿನಗಳ ಕಾಲಾವಕಾಶ ಇದ್ದು, ಈ ಹಿನ್ನೆಲೆ ಪ್ರಜ್ವಲ್ ಪರ ವಕೀಲರು ಸೆಷನ್ಸ್ ಕೋರ್ಟ್ ಆದೇಶವನ್ನು ಅಧ್ಯಯನ ಮಾಡಿ ಮೇಲ್ಮನವಿ ಸಲ್ಲಿಸಲು ಸಿದ್ದತೆ ನಡೆಸಿದ್ದು, ದಸರಾ ರಜೆ ಬಳಿಕ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ ಮಾಡಲು ತಯಾರಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.