ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ತುಂತುರು ಮಳೆ ಆರಂಭವಾಗಿದೆ. ಮಲ್ಲೇಶ್ವರಂ, ಮೆಜೆಸ್ಟಿಕ್ , ಶಾಂತಿನಗರ, ಯಶವಂತರಪುರ ಸೇರಿ ಹಲವೆಡೆ ಮಳೆ ಸುರಿಯುತ್ತಿದೆ. ಈ ಜಿಟಿ ಜಿಟಿ ಮಳೆಯ ನಡುವೆಯೂ ಜನ ಕೆಲಸ, ಕಚೇರಿಗಳಿಗೆ ತೆರಳುತ್ತಿದ್ದಾರೆ.
ಕಳೆದ ವಾರ ಶ್ರೀಲಂಕಾಗೆ ಅಪ್ಪಳಿಸಿದ ದಿತ್ವಾ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಉಷ್ಣಾಂಶ ಬಹಳ ಇಳಿಕೆಯಾಗಿತ್ತು. ಬೆಳಗ್ಗೆ ಮತ್ತು ರಾತ್ರಿ ವಿಪರೀತ ಚಳಿ ಇತ್ತು.
ಇಂದು ಬೆಂಗಳೂರಿನಲ್ಲಿ 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಶ್ ಕನಿಷ್ಠ ಉಶ್ಣಾಂಶ ದಾಖಲಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : ಸರಿಯಾಗಿ ನಿರ್ಧಾರ ತೆಗೆದುಕೊಳ್ಳಲು ಬರಲ್ಲ | ರಕ್ಷಿತಾ ವಿರುದ್ಧ ತಿರುಗಿಬಿದ್ದ ಮನೆಮಂದಿ


















