ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿ ಅವರನ್ನು ಒಳಗೊಂಡ ಅರ್ಜೆಂಟೀನಾ ಫುಟ್ಬಾಲ್ ತಂಡ ಮುಂದಿನ ವರ್ಷ ಕೇರಳದಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್ ಪಂದ್ಯ ಆಡಲಿದೆ ಎಂದು ಕೇರಳ ಕ್ರೀಡಾ ಸಚಿವ ವಿ.ಅಬ್ದುರಹಿಮಾನ್ ಮಾಹಿತಿ ನೀಡಿದ್ದಾರೆ.
ತಿರುವನಂತಪುರದಲ್ಲಿ ಮಾತನಾಡಿದ ಸಚಿವರು, ‘ರಾಜ್ಯ ಸರ್ಕಾರದ ಸಂಪೂರ್ಣ ಮೇಲ್ವಿಚಾರಣೆಯಲ್ಲಿ ಪಂದ್ಯ ನಡೆಯಲಿದ್ದು, ಈ ಹೈವೋಲ್ಟೇಜ್ ಫುಟ್ಬಾಲ್ ಈವೆಂಟ್ ನ್ನು ಆಯೋಜಿಸಲಾಗುತ್ತಿದೆ. ಈ ಬಗ್ಗೆ ಅರ್ಜೆಂಟೀನಾ ತಂಡದ ಮ್ಯಾನೇಜ್ ಮೆಂಟ್ ಅಧಿಕೃತ ಘೋಷಣೆ ಮಾಡಲಿದೆ ಎಂದಿದ್ದಾರೆ.
ಅರ್ಜೆಂಟೀನಾ ಫುಟ್ಬಾಲ್ ತಂಡವು ವೆನೆಜುವೆಲಾ ವಿರುದ್ಧದ ಫಿಫಾ ಅಂತಾರಾಷ್ಟ್ರೀಯ ಸೌಹಾರ್ದ ಪಂದ್ಯಕ್ಕಾಗಿ ಭಾರತಕ್ಕೆ ಕೊನೆಯ ಬಾರಿಗೆ ಭೇಟಿ ನೀಡಿತ್ತು. ಅರ್ಜೆಂಟೀನಾ ಮತ್ತು ವೆನೆಜುವೆಲಾ ಮಧ್ಯೆ ಈ ಪಂದ್ಯವು ಸೆಪ್ಟೆಂಬರ್ 2, 2011 ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ನಡೆದಿತ್ತು. ಈ ವೇಳೆ ಭಾರತವನ್ನು ಮೆಸ್ಸಿ ಹೊಗಳಿದ್ದರು. ಈಗ ಭಾರತಕ್ಕೆ ಬರಲು ಸಿದ್ಧರಾಗಿದ್ದಾರೆ.