ಬೆಂಗಳೂರು: ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಲಿಕ್ಕರ್ ಬಾಟಲ್ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ.
ಯಶವಂತಪುರ, ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಸಿಗರೇಟ್ ನ ತಂಬಾಕು ತೆಗೆದು ಗಾಂಜಾ ತುಂಬಿಟ್ಟಿರುವುದು ಪತ್ತೆಯಾಗಿದೆ. ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ನ್ಯಾಯಮೂರ್ತಿ ಬಿಎಸ್ ಪಾಟೀಲ್, ಉಪಲೋಕಾಯುಕ್ತ ಬಿ. ವೀರಪ್ಪ ಪರಿಶೀಲನೆ ನಡೆಸಿ, ಆಘಾತ ವ್ಯಕ್ತಪಡಿಸಿದ್ದಾರೆ.
ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಖುದ್ದು ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ.ಬಿ.ಎಸ್ ಪಾಟೀಲ್ ಅವರು ಸರ್ಚ್ ವಾರಂಟ್ ಹೊರಡಿಸಿದ್ದರು. ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಖುದ್ದು ಪರಿಶೀಲನೆಗೆ ವಾರೆಂಟ್ ಹೊರಡಿಸಿತ್ತು.
ಸಂಜೆ ವೇಳೆ ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಸರ್ಕಾರಿ ಕಚೇರಿಗಳಲ್ಲೇ ಗಾಂಜಾ ಮತ್ತು ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಇದಕ್ಕೆ ಸಾರ್ವಜನಿಕರು ಆಘಾತ ವ್ಯಕ್ತಪಡಿಸುವಂತಾಗಿದೆ.
ಈ ವಿಷಯವಾಗಿ ಮಾತನಾಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಲೋಕಾಯುಕ್ತ ಕಚೇರಿಗೆ ಸುಮಾರು 132 ದೂರುಗಳು ಬಂದಿದ್ದು, 61 ಅಬಕಾರಿ ಅಧಿಕಾರಿಗಳ ಮೇಲೆ ಸರ್ಚ್ ಮಾಡಲಾಗಿದೆ. ಅಬಕಾರಿ ಕಚೇರಿಯ ವ್ಯವಹಾರಗಳ ಬಗ್ಗೆ ಪರಿಶೀಲನೆ ನಡೆಸಲು ಸರ್ಚಿಂಗ್ ಮಾಡಲಾಗುತ್ತಿದೆ. ಪರಿಶೀಲನೆ ವೇಳೆ ಹಲವಾರು ಲೋಪದೋಷಗಳು ಕಂಡು ಬಂದಿವೆ ಎಂದು ಹೇಳಿದ್ದಾರೆ.