ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ನ್ಯಾಯಾಲಯ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ವಹಿಸಿದೆ.
ಐದು ದಿನಗಳ ಕಸ್ಟಡಿಗೆ ಕೋರಿ ಸಿಬಿಐ ಸಲ್ಲಿಸಿದ ಅರ್ಜಿ ಪರಿಶೀಲಿಸಿದ ನ್ಯಾಯಾಲಯ ಮೂರು ದಿನಗಳ ಕಾಲ ಕಸ್ಟಡಿಗೆ ನೀಡಿದೆ. ಪ್ರಕರಣದಲ್ಲಿ ದೊಡ್ಡ ಪಿತೂರಿಯನ್ನು ಬಹಿರಂಗಪಡಿಸಲು ಕೇಜ್ರಿವಾಲ್ ಬಂಧನ ಅಗತ್ಯ ಎಂದು ಸಿಬಿಐ ಹೇಳಿತ್ತು.

ಭ್ರಷ್ಟಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತು. ಆಗ ವಶಕ್ಕೆ ಪಡೆಯಲು ನ್ಯಾಯಾಲಯ ಅನುಮತಿ ನೀಡಿತು.
ಸಿಬಿಐ, ಅಬಕಾರಿ ನೀತಿ “ಹಗರಣ” ದ ದೊಡ್ಡ ಪಿತೂರಿಯನ್ನು ಬಹಿರಂಗಪಡಿಸಲು ಅವರನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ನ್ಯಾಯಾಲಯಕ್ಕೆ ಹೇಳಿತ್ತು. ಅವರ ಕಸ್ಟಡಿಯ ಅಗತ್ಯವಿದೆ. ವಿಜಯ್ ನಾಯರ್ ತನ್ನ ಕೈಕೆಳಗೆ ಕೆಲಸ ಮಾಡುತ್ತಿದ್ದಾನೆ ಎಂಬುವುದನ್ನೂ ಗುರುತಿಸುತ್ತಿಲ್ಲ. ಅತಿಶಿ ಮರ್ಲೆನಾ ಮತ್ತು ಸೌರಬ್ ಭಾರದ್ವಾಜ್ ಅವರ ಅಡಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅವರು ಹೇಳುತ್ತಾರೆ. ಅವರು ಸಂಪೂರ್ಣ ಜವಾಬ್ದಾರಿಯನ್ನು ಮನೀಶ್ ಸಿಸೋಡಿಯಾ ಮೇಲೆ ಹಾಕಿ ಅಬಕಾರಿ ನೀತಿಯ ಬಗ್ಗೆ ತನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. ನಮ್ಮ ಬಳಿ ಎಲ್ಲ ಮಾಹಿತಿ ಇದೆ ಎಂದು ಹೇಳಿತು.
