ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮದ್ಯ ಮಾರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಳೆ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ.

ಫೆಡೆರೇಷನ್ ಆಫ್ ವೈನ್ ಮರ್ಚೆಂಟ್ ಅಸೋಸಿಯೇಷನ್ ವತಿಯಿಂದ ಈ ಹೋರಾಟಕ್ಕೆ ಕರೆ ನೀಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ 579 ಸನ್ನದುಗಳನ್ನು ಹರಾಜು ಮಾಡಲು ಅಬಕಾರಿ ಇಲಾಖೆ ಶಿಫಾರಸು ಮಾಡಿದೆ ಎಂದು ಸಂಘಟನೆ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.
ಚಿಲ್ಲರೆ ಮದ್ಯ ಮಾರಾಟ ಸನ್ನದುದಾರರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಒತ್ತಾಯಿಸಿರುವ ಸಂಘಟನೆ, ಸರ್ಕಾರ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಮಧ್ಯಪ್ರಾಚ್ಯ ಯುದ್ಧದಿಂದ ಕುಕ್ಕುಟೋದ್ಯಮಕ್ಕೆ ಭಾರೀ ಹೊಡೆತ.. ರಫ್ತಾಗದೇ ಕರ್ನಾಟಕದಲ್ಲೇ ಉಳಿದ ಲಕ್ಷಾಂತರ ಮೊಟ್ಟೆ!



















