ಮೈಸೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಸರ್ಕಾರಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಕಾವೇರಿ ನೀರಾವರಿ ನಿಗಮದ (Cauvery Corporation) ಕಾರ್ಯಪಾಲಕ ಇಂಜಿನಿಯರ್ ಕಾವೇರಿ ರಂಗನಾಥ್ ಹಾಗೂ ಅಕೌಂಟ್ ಸೂಪರಿಡೆಂಟ್ ಉಮಾಮಹೇಶ್ ಲೋಕಾಯುಕ್ತ (Lokayukta Raids) ಬಲೆಗೆ ಬಿದ್ದ ಅಧಿಕಾರಿಗಳು. ಟೆಂಡರ್ ಹಣ ಬಿಡುಗಡೆಗೆ ಚಾಮರಾಜನಗರ ನಿವಾಸಿ ಅಬ್ದುಲ್ ಅಜೀಜ್ ಎಂಬುವವರ ಹತ್ತಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 2022ರಲ್ಲಿ ನಾಲೆ ರಿಪೇರಿಗೆ ಟೆಂಡರ್ ಕರೆಯಲಾಗಿತ್ತು. 23.10 ಲಕ್ಷ ರೂ.ಗೆ ಕಾಮಗಾರಿ ಹಣ ಬಿಡುಗಡೆ ಮಾಡಲು ಶೇ. 6ರಷ್ಟು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಮೊದಲು ಶೇ. 6ರಷ್ಟು ಹೇಳಿ ಆನಂತರ ಹಣ ಪಡೆಯಲು ಬಂದಾಗ ಶೇ. 10ರಷ್ಟು ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ವೇಳೆ ಇಬ್ಬರೂ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.