ಬೆಂಗಳೂರು : ನೀವು MBBS ಮುಗಿಸಿದ್ದೀರಾ? ಸರ್ಕಾರದ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಒಳ್ಳೆಯ ಅವಕಾಶ ಲಭಿಸಿದೆ. ನವದೆಹಲಿಯಲ್ಲಿರುವ, ಸರ್ಕಾರಿ ಸ್ವಾಮ್ಯದ ಲೋಕನಾಯಕ ಆಸ್ಪತ್ರೆಯಲ್ಲಿ (Lok Nayak Hospital Recruitment 2026) ಖಾಲಿ ಇರುವ 31 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಲೋಕನಾಯಕ ಆಸ್ಪತ್ರೆ
ಒಟ್ಟು ಹುದ್ದೆಗಳು: 31
ಹುದ್ದೆಗಳ ಹೆಸರು: ಜೂನಿಯರ್ ರೆಸಿಡೆಂಟ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ. ಒಬಿಸಿ ಸಮುದಾಯದವರಿಗೆ 3 ವರ್ಷಗಳ ಸಡಿಲಿಕೆ ಇರುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಬಿಎಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 56,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ lnjp.delhi.gov.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
E-1, Branch Administrative Block, Lok Nayak Hospital, New Delhi-110002. ಮಾರ್ಚ್ 10ರಂದು ಇದೇ ವಿಳಾಸದಲ್ಲಿ ಸಂದರ್ಶನ ನಡೆಯಲಿದೆ.
ಇದನ್ನೂ ಓದಿ : ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!



















