ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಹಸೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು ಲೋಕಾ ಡಿವೈಎಸ್ಪಿ ರಾಜೇಶ್ ಕೋಟ್ಯಾ ನೇತೃತ್ವದಲ್ಲಿ ದಾಳಿ ನಡೆಸಿದ್ದು, ತಹಸೀಲ್ದಾರ್ ಕಚೇರಿಯ ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಸಿಬ್ಬಂದಿಗಳ ಕಾರ್ಯನಿರ್ವಹಣೆ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ದಿಢೀರ್ ದಾಳಿ ಮಾಡಿ ಕಚೇರಿಯಲ್ಲಿ ಕುಳಿತು ವಿಚಾರಣೆ ನಡೆಸಿದ್ದಾರೆ.