ಬೆಂಗಳೂರು: ವಿದ್ಯುತ್ ಮಂಜೂರಾತಿ ಸಂಬಂಧ ನಿರಾಕ್ಷೇಪಣಾ ಪತ್ರ(ಎನ್‌ಒಸಿ) ನೀಡಲು 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಒಎಸ್‌ಡಿ ಹಾಗೂ ಕೆಪಿಟಿಸಿಎಲ್ ಕಾರ್ಯ ನಿರ್ವಾಹಕ ಎಂಜಿನಿಯರ್ ಜ್ಯೋತಿ ಪ್ರಕಾಶ್ ಮತ್ತು ಆತನ ಕಾರು ಚಾಲಕ ನವೀನ್ ನನ್ನು ಲೋಕಾಯುಕ್ತರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಬ್ಯಾಡರಹಳ್ಳಿ ಕೆಂಪೇಗೌಡ ನಗರ ನಿವಾಸಿ ಕೆ.ಎಂ.ಅನಂತರಾಜು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಲೋಕ ಅಧಿಕಾರಿಗಳು, ಲಂಚ ಸ್ವೀಕರಿಸುವ ವೇಳೆ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. ಡಿಆರ್ ಡೆವಲಪರ್ ಗೆ ಎನ್ ಓ ಸಿ ನೀಡಲು ಒಂದು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳು 50 ಸಾವಿರ ಅಡ್ವಾನ್ಸ್ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರು ಸೆರೆಹಿಡಿದ್ದಿದ್ದಾರೆ. ಇದೀಗ ಸದ್ಯ ಲೋಕಾ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.



















