ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆ ಆರಂಭಿಸಿದ್ದಾರೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಭ್ರಷ್ಟ ತಿಮಿಂಗಲಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಲಾಗಿದೆ.
ಬೆಂಗಳೂರಿನ 12, ತುಮಕೂರಿನ 7, ಬೆಂಗಳೂರು ಗ್ರಾಮಾಂತರದ 8, ಯಾದಗಿರಿಯ 5, ಮಂಗಳೂರಿನ 4 ಹಾಗೂ ವಿಜಯಪುರದ 4 ಸ್ಥಳಗಳಲ್ಲಿ ಮೆಗಾ ತಲಾಶ್ ಮುಂದುವರಿದೆ.
ತುಮಕೂರಿನ ನಿರ್ಮಾಣ ಕೇಂದ್ರದ ಯೋಜನಾ ನಿರ್ದೇಶಕ ರಾಜಶೇಖರ್, ದಕ್ಷಿಣ ಕನ್ನಡ ಜಿಲ್ಲೆಯ ಸರ್ವೆ ಮೇಲ್ವಿಚಾರಕ ಮಂಜುನಾಥ್, ವಿಜಯಪುರದ ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಶ್ರೀಮತಿ ರೇಣುಕಾ, ಬೆಂಗಳೂರು ನಗರದ, ನಗರ ಮತ್ತು ಗ್ರಾಮೀಣ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕ ಮುರಳಿ, ಟಿವಿ ಕಾನೂನು ಮಾಪನಶಾಸ್ತ್ರದ ಇನ್ಸ್ ಪೆಕ್ಟರ್ ಎಚ್ ಆರ್ ನಟರಾಜ್, ಬೆಂಗಳೂರು ಗ್ರಾಮಾಂತರದ ಹೊಸಕೋಟೆಯ ತಾಲೂಕು ಕಚೇರಿ ಎಸ್ ಡಿಎ ಅನಂತ್ ಕುಮಾರ್ ಮತ್ತು ಯಾದಗಿರಿಯ ಶಹಾಪುರದ ಉಮಾಕಾಂತ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ.