ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ದೂರು ದಾಖಲಿಸಿರುವ ಸ್ನೇಹಮಹಿ ಕೃಷ್ಣಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚಿಸಿದೆ. ಹೀಗಾಗಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಹಿ ಕೃಷ್ಣಗೆ ಲೋಕಾಯುಕ್ತ ಎಸ್ಪಿ ಉದೇಶ್ ನೋಟಿಸ್ ನೀಡಿದ್ದಾರೆ.
ನಾಳೆ ಬೆಳಗ್ಗೆ 7.30ಕ್ಕೆ ಕಚೇರಿಗೆ ಹಾಜರಾಗುವಂತೆ ದೂರುದಾರ ಸ್ನೇಹಮಹಿ ಕೃಷ್ಣಗೆ ವಾಟ್ಸಾಪ್ ಮೂಲಕ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಸ್ಪಿ ಉದೇಶ್ ಸಿಆರ್ ಪಿಸಿ ಕಾಯ್ದೆಯಡಿ ಎಫ್ ಐಆರ್ ದಾಖಲಿಸಿದ್ದರು.
ಎಫ್ಐಆರ್ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲಿದ್ದಾರೆ. ಅಗತ್ಯವಿದ್ದಾಗ ವಿಚಾರಣೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೂ ನೋಟಿಸ್ ನೀಡಬಹುದು. ಅಲ್ಲದೇ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಬಂಧಿಸುವ ಅಧಿಕಾರವನ್ನೂ ಹೊಂದಿದ್ದಾರೆ. ಹೀಗಾಗಿ ತನಿಖೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯರನ್ನು ವಶಕ್ಕೆ ಪಡೆಯಲೂಬಹುದಾಗಿದೆ.