ಲಂಚ ಪಡೆಯುತ್ತಿದ್ದಾಗ ಸರ್ಕಾರಿ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಅಡಿಷನಲ್ ಸೆಕ್ರೇಟರಿ ವೆಂಕಟೇಶ್(42) ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ವೆಂಕಟೇಶ್, ಟ್ರಾನ್ಸ್ ಪೋರ್ಟ್ ಕಾರ್ಪೊರೇಷನ್ ನ ಪರ್ಮಿಟ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಈಗಾಗಲೇ ಅನುಮತಿ ಸಿಕ್ಕಿದ್ದ ಅರ್ಜಿಗೆ ಮತ್ತೆ ಅನುಮತಿ ಹೆಸರಿನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಅರ್ಬಾಜ್ ಖಾನ್ ಎಂಬ ವ್ಯಕ್ತಿಯಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಅರ್ಬಾಜ್ ಲೋಕಾಯುಕ್ತರಿದೆ ದೂರು ನೀಡಿದ್ದರು. 35,100 ರೂ. ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು.