ಶಿವಮೊಗ್ಗ: ಮಹಾನಗರ ಪಾಲಿಕೆ ಅಧಿಕಾರಿಯೊಬ್ಬ ಆಶ್ರಯ ಮನೆಯೊಂದಕ್ಕೆ ಖಾತೆ ಮಾಡಿಕೊಡಲು 10,000 ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಯುಕ್ತರ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ನೆಹರೂ ರಸ್ತೆಯ ನೇತಾಜಿ ಸುಭಾಷಚಂದ್ರ ಬೋಸ್ ವಾಣಿಜ್ಯ ಸಂಕೀರ್ಣದಲ್ಲಿರುವ ಆಶ್ರಯ ಕಚೇರಿಯಲ್ಲಿ ನಡೆದಿದೆ.
ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಖರೀದಿಸಿದ್ದ ನಿವೇಶನಕ್ಕೆ ಖಾತೆ ಮಾಡಿಕೊಡಲು ಮಹಾನಗರ ಪಾಲಿಕೆಯ ಆಶ್ರಯ ಕಚೇರಿಯ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ. ಶಶಿಧರ್ 10,000 ರೂ ಹಣಕ್ಕೆ ಬೇಡಿಕೆ ಇಟ್ಟಿದ್ದ, ಈ ವೇಳೆ ಮೊಹಮ್ಮದ್ ಆಸಿಫ್ ಎಂಬುವವರು ಲೋಕಾಯುಕ್ತಕ್ಕೆ ವಾಯ್ಸ್ ರೆಕಾರ್ಡ್ ನೀಡಿ ದೂರು ಸಲ್ಲಿಸಿದ್ದರು.
ಈ ಹಿನ್ನಲೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಂಜುನಾಥ ಚೌಧರಿ ನೇತೃತ್ವದಲ್ಲಿ ದಾಳಿ ನಡೆಸಿ ಎ.ಪಿ.ಶಶಿಧರ್ ಮತ್ತು 10,000 ರೂ. ನಗದು ವಶಕ್ಕೆ ಪಡೆದಿದ್ದಾರೆ.