ಕೊಪ್ಪಳ: ನಗರಸಭೆ ಕಚೇರಿ ಸೇರಿ 5 ಕಡೆ ಲೋಕಾಯುಕ್ತ ದಾಳಿ ನಡೆಸಿದೆ. ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 2023-24 ನೇ ಸಾಲಿನ ನಗರಸಭೆಯ ಅನುದಾನದಲ್ಲಿ ದುರ್ಬಳಕೆ ಆರೋಪ ಕೇಳಿ ಬಂದ ಹಿನ್ನೆಲೆ ಈ ದಾಳಿ ನಡೆಸಲಾಗಿದೆ.
336 ಕಾಮಗಾರಿಗಳಲ್ಲಿ ಸುಮಾರು 10 ಕೋಟಿ ರೂಪಾಯಿ ದುರ್ಬಳಕೆಯಾಗಿದೆ. ಅರ್ಧಂಬರ್ಧ ಕಾಮಗಾರಿ, ಕೆಲ ಕಡೆ ಕಾಮಗಾರಿ ಮಾಡದೆ ಹಣ ಬಳಸಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿತ್ತು. ಹೀಗಾಗಿ ನಗರಸಭೆ ಜಿಇ ಸೋಮಲಿಂಗಪ್ಪ, ಕಂದಾಯ ಅಧಿಕಾರ ಉಜ್ಚಲ, ಗುತ್ತಿಗೆದಾರರಾದ ಶಕೀಲ ಪಟೇಲ್ (ನಗರಸಭೆ ಅಧ್ಯಕ್ಷನ ಸಹೋದರ), ಪ್ರವೀಣ ಕಂದಾರಿ ಮನೆಯ ಮೇಲೆ ಕೂಡ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.



















