ರಾಮನಗರ: ಆಕ್ರಮ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಸಬ್ ರಿಜಿಸ್ಟರ್ ಹಾಗೂ ಡಿಆರ್ ಕಚೇರಿಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭದಲ್ಲಿ ಕಚೇರಿಯಲ್ಲಿನ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ರಾಮನಗರದ ಕಂದಾಯ ಭವನದಲ್ಲಿರುವ ಉಪ ನೋಂದಣಾಧಿಕಾರಿ ಹಾಗೂ ವಿವಾಹ ನೋಂದಾಣಾಧಿಕಾರಿಗಳ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಅಲ್ಲದೇ, ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಡಿಆರ್ ಕಚೇರಿ ಮೇಲೆ ಕೂಡ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೊತೆಗೆ ಕನಕಪುರ, ಚನ್ನಪಟ್ಟಣ, ಮಾಗಡಿ ಸಬ್ ರಿಜಿಸ್ಟರ್ ಕಚೇರಿಗಳ ಮೇಲೆಯೂ ದಾಳಿ ನಡೆಸಿದ್ದಾರೆ. ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ಸಾಕಷ್ಟು ದೂರು ಬಂದ ಹಿನ್ನೆಲೆಯಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಂಡು ದಾಳಿ ನಡೆಸಿದ್ದಾರೆ.