ಕೊಪ್ಪಳ : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಶೇಕು ಚವ್ಹಾಣ ಅವರ ಮನೆ ಮೇಲೆ ದಾಳಿ ಮಾಡಿ ಶಾಕ್ ನೀಡಿದ್ದಾರೆ.
ಅವರ ಮನೆಯಲ್ಲಿರುವ ಖಡತಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ ಆ್ಯಂಡ್ ಕಮರ್ಷಿಯಲ್ ನ ಉಪ ನಿರ್ದೇಶಕರಾಗಿರುವ ಶೇಕು ಚವ್ಹಾಣ್ ಅವರು ಆದಾಯ ಮೀರಿ ಆಸ್ತಿ ಗಳಿಸಿದ್ದಾರೆಂದು ಬಂದ ದೂರಿನನ್ವಯ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ಕೊಪ್ಪಳ ,ಹುಬ್ಬಳ್ಳಿ ಎರಡು ಕಡೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಅವರ ಹುಬ್ಬಳ್ಳಿ ಮನೆ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದಾರೆಂದು ಸದ್ಯ ಮಾಹಿತಿ ಲಭ್ಯವಾಗಿದೆ.



















