ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ರಾಜ್ಯದ ಹಲವು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಾರಿಗೆ ಇಲಾಖೆಯ ಜಾಯಿಂಟ್ ಕಮಿಷನರ್ ಶೋಭಾ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕಡೂರಿನ ಕುಟುಂಬ ಕಲ್ಯಾಣ ಇಲಾಖೆಯ ಡಾ. ಎಸ್.ಎನ್. ಉಮೇಶ್, ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಇನ್ಸ್ ಪೆಕ್ಟರ್ ರವೀಂದ್ರ ಮನೆ ಮೇಲೆ ದಾಳಿ ನಡೆದಿದ್ದು, ಆಸ್ತಿ, ದಾಖಲೆಗಳ ಪರಿಶೀಲನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪೂರ ತಹಸೀಲ್ದಾರ್ ಪ್ರಕಾಶ್ ಶ್ರೀಧರ್ ಗಾಯಕವಾಡ, ತುಮಕೂರು ಜಿಲ್ಲೆಯ ನಿವೃತ್ತ ಅರ್ ಟಿ ಓ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಅಲ್ಲದೇ, ಗದಗ- ಬೆಟಿಗೇರಿಯ ಪಾಲಿಕೆಯ ಎಇಇ ಹುಚ್ಚೇಶ್, ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣ ಅಧಿಕಾರಿ ಆರ್.ಎಚ್. ಲೋಕೇಶ್, ರಾಯಚೂರು ಜಿಲ್ಲೆಯ ಬೆಸ್ಕಾಂ ಜೂ. ಇಂಜಿನಿಯರ್ ಹುಲಿರಾಜ್ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.