ಬೆಂಗಳೂರು : ಒಂಟಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಂಗಸಂದ್ರದ ಮುನಿಯಪ್ಪ ಲೇಔಟ್‌ನಲ್ಲಿ ನಡೆದಿದೆ.
ಉತ್ತರ ಭಾರತ ಮೂಲದ ಕೃಷ್ಣ ಬರ್ಮನ್ (40) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಮೃತ ಮಹಿಳೆ ಮುನಿಯಪ್ಪ ಲೇಔಟ್‌ನಲ್ಲಿ ಸಣ್ಣ ರೂಮ್ ಮಾಡಿಕೊಂಡಿದ್ದು, ಅಡುಗೆ ಕೆಲಸ ಮಾಡಿಕೊಂಡು ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದರು.
ಪ್ರಾಥಮಿಕ ಮಾಹಿತಿ ಪ್ರಕಾರ ಪರಿಚಯಸ್ಥರೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಬೊಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : GBA ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ – ಮೊದಲ ದಿನವೇ ಶೇ.96.40ರಷ್ಟು ಮಕ್ಕಳಿಗೆ ಲಸಿಕೆ!


















