ಬೆಂಗಳೂರು: ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಲಾರಿ ಮಾಲೀಕರ ಸಂಘ ಇಂದು ಮಧ್ಯರಾತ್ರಿಯಿಂದಲೇ ಬಂದ್ ಗೆ ಕರೆ ನೀಡಿವೆ.
ಡೀಸೆಲ್ ದರ ಏರಿಕೆ, ಟೋಲ್, ಶುಲ್ಕ ಹೆಚ್ಚಳ, ಆರ್ ಟಿಓ ಕಿರುಕುಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ (State Lorry Owner’s Association) ಕರೆ ನೀಡಿದೆ.
ಸುಮಾರು 6 ಲಕ್ಷಕ್ಕೂ ಹೆಚ್ಚು ಲಾರಿಗಳು ಇಂದು ಮಧ್ಯರಾತ್ರಿಯಿಂದಲೇ ಸೇವೆ ಬಂದ್ ಮಾಡಲಿವೆ. 6 ತಿಂಗಳಲ್ಲಿ ಸರ್ಕಾರ 2 ಬಾರಿ ಡೀಸೆಲ್ ದರ ಹೆಚ್ಚಿಸಿದೆ. ಡೀಸೆಲ್ ದರ ಇಳಿಸಬೇಕು ಹಾಗೂ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಸರ್ಕಾರಕ್ಕೆ ಲಾರಿ ಮಾಲೀಕರು ಏಪ್ರಿಲ್ 14ರ ಗಡುವು ನೀಡಿದ್ದರು. ಆದರೆ, ಸಂಧಾನವಾಗದ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿಯಿಂದಲೆ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಮುಂದಾಗಿದೆ.
ಮುಷ್ಕರದ (Lorry Strike) ಪರಿಣಾಮವಾಗಿ ಮಂಗಳವಾರದಿಂದ ಅನೇಕ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಲಾರಿ ಮುಷ್ಕರದ ಕಾರಣ 6 ಲಕ್ಷ ಲಾರಿಗಳ ಸಂಚಾರ ಬಂದ್ ಆಗಲಿದೆ.
ಮುಷ್ಕರಕ್ಕೆ ಯಾವ ಸಂಘಟನೆಗಳ ಬೆಂಬಲ?
– ಆಲ್ ಇಂಡಿಯಾ ಮೋಟರ್ ಟ್ರಾನ್ಸ್ಪೋರ್ಟ್ ಕಾಂಗ್ರೆಸ್ ದೆಹಲಿ
– ಸೌಥ್ ಇಂಡಿಯಾ ಮೋಟರ್ ಟ್ರಾನ್ಸ್ಪೋರ್ಟ್ ಅಸೋಸಿಯೇಷನ್
– ಕರ್ನಾಟಕ ಗೂಡ್ಸ್ ಟ್ರಾನ್ಸ್ಪೋರ್ಟ್ ಅಸೋಸಿಯೇಷನ್
– ಏರ್ಪೋರ್ಟ್ ಟ್ಯಾಕ್ಸಿ ಅಸೋಸಿಯೇಷನ್
– ಬೆಂಗಳೂರು ಟೂರಿಸ್ಟ್ ಟ್ಯಾಕ್ಸಿ ಅಸೋಸಿಯೇಷನ್
– ಜಲ್ಲಿ ಕಲ್ಲು, ಮರಳು ಲಾರಿ ಅಸೋಸಿಯೇಷನ್
– ರಾಜ್ಯ ಪಡಿತರ ಆಹಾರ ಧಾನ್ಯಗಳ ಸಾಗಾಣಿಕೆದಾರರ ಸಂಘ
– ಸೌಥ್ ಜೋನ್ ಎಲ್ಪಿಜಿ ಅಸೋಸಿಯೇಷನ್


















