ಮೈಸೂರು : ಹಠಾತ್ ಬ್ರೇಕ್ ಹಾಕಿದ ಲಾರಿಗೆ ಹಿಂಬದಿಯಿಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಮೈಸೂರಿನ ನಂಜನಗೂಡು ರಸ್ತೆಯ ಗುಂಡೂರಾವ್ ನಗರದ ಬಳಿ ಈ ಘಟನೆ ನಡೆದಿದೆ. ಸಾರಿಗೆ ಬಸ್ ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.
ಸಾರಿಗೆ ಬಸ್ ನ ಮುಂದೆ ಸಾಗುತ್ತಿದ್ದ ಲಾರಿ ಚಾಲಕ ರಸ್ತೆ ದಾಟುತ್ತಿದ್ದ ಜನರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹಠಾತ್ ಬ್ರೇಕ್ ಹಾಕಿದ್ದಾರೆ. ಆಗ ಹಿಂಬದಿಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಬಸ್ ನ ಮುಂಬದಿಯಲ್ಲಿ ಕುಳಿತಿದ್ದ ಐದಾರು ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲಕಾಲ ವಾಹನಗಳ ಸಂಚಾರ ಅಸ್ತವ್ಯಸ್ತವಾಗಿತ್ತು.ಸ್ಥಳಕ್ಕಾಗಿಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.